ಹರ್ಯಾಣ, ಪಂಜಾಬ್ ಉದ್ವಿಗ್ನ : ಇಂದು ರಾಜನಾಥ್ ನೇತೃತ್ವದ ಉನ್ನತ ಮಟ್ಟದ ಸಭೆ

ನವದೆಹಲಿ: ಪಂಜಾಬ್ ಹಾಗೂ ಹರ್ಯಾಣದಲ್ಲಿ ಹೆಚ್ಚುತ್ತಿರುವ ಹಿಂಸಾಚಾರದ ಹಿನ್ನೆಲೆಯಲ್ಲಿ ಕಾನೂನು ಸುವ್ಯವಸ್ಥೆ ಕುರಿತಂತೆ ಚರ್ಚಿಸಲು ಗೃಹ ಸಚಿವ ರಾಜನಾಥ್ ಸಿಂಗ್ ಇಂದು ಉನ್ನತ ಮಟ್ಟದ ಸಭೆ ಕರೆದಿದ್ದಾರೆ.
ಅತ್ಯಾಚಾರ ಪ್ರಕರಣದಲ್ಲಿ ಡೇರಾ ಸಚಾ ಸೌದಾ ಮುಖ್ಯಸ್ಥ ಗುರ್ಮಿತ್ ರಾಮ್ ರಹೀಮ್ ಸಿಂಗ್ ದೋಷಿ ಎಂದು ಶುಕ್ರವಾರ ಕೋರ್ಟ್ ತೀರ್ಪು ನೀಡಿದ ಬಳಿಕ ಗುರ್ಮಿತ್ ಬೆಂಬಲಿಗರು ಹಿಂಸಾಚಾರಕ್ಕಿಳಿದಿದ್ದು, ಹರ್ಯಾಣ ಹಾಗೂ ಪಂಜಾಬ್‌ನಲ್ಲಿ ಇಂದೂ ಕೂಡಾ ಉದ್ವಿಗ್ನ ಪರಿಸ್ಥಿತಿ ಮುಂದುವರಿದಿದೆ,
ಹಿಂಸಾಚಾರದಲ್ಲಿ ಹಲವು ಸಾವು-ನೋವು ಸಂಭವಿಸಿದ್ದು, ಸಾರ್ವಜನಿಕ ಆಸ್ತಿಪಾಸ್ತಿಗೂ ಹಾನಿಯಾಗಿದೆ. ಹಿಂಸಾಚಾರದಲ್ಲಿ ಇದುವರೆಗೂ ಕನಿಷ್ಠ 32 ಮಂದಿ ಬಲಿಯಾಗಿದ್ದಾರೆ, 250ಕ್ಕೂ ಅಧಿಕ ಜನರು ಗಾಯಗೊಂಡಿದ್ದಾರೆ ಎಂದು ಹೇಳಲಾಗಿದೆ. ಹರಿಯಾಣದಲ್ಲಿ ಒಟ್ಟು 250 ರೈಲುಗಳ ಸಂಚಾರ ರದ್ದು ಮಾಡಲಾಗಿದೆ.

LEAVE A REPLY