ಹಿಂಸಾಚಾರ ಪ್ರಕರಣ: 1,000 ಮಂದಿ ಪೊಲೀಸ್ ವಶಕ್ಕೆ

ನವದೆಹಲಿ: ಅತ್ಯಾಚಾರ ಪ್ರಕರಣದಲ್ಲಿ ಡೇರಾ ಸಚಾ ಸೌದಾ ಮುಖ್ಯಸ್ಥ ಗುರ್ಮಿತ್ ರಾಮ್ ರಹೀಮ್ ಸಿಂಗ್ ದೋಷಿ ಎಂದು ಶುಕ್ರವಾರ ಕೋರ್ಟ್ ತೀರ್ಪು ನೀಡಿದ ಬಳಿಕ ನಡೆದ ಹಿಂಸಾಚಾರ ಪ್ರಕರಣಕ್ಕೆ ಸಂಬಂಧಿಸಿ 1,000 ಮಂದಿಯನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.
ಎಲ್ಲೆಡೆ ಬಿಗಿ ಭದ್ರತೆ ಕೈಗೊಳ್ಳಲಾಗಿದ್ದು, ರೋಹ್ಟಕ್‌ನ ಸುನಾರಿಯಾ ಜೈಲಿನ ಸುತ್ತಲೂ 1 ಕಿ.ಮೀ ವ್ಯಾಪ್ತಿಯಲ್ಲಿ ಕೇಂದ್ರೀಯ ಕೈಗಾರಿಕಾ ಭದ್ರತಾ ಪಡೆ ಯೋಧರನ್ನು ನಿಯೋಜಿಸಲಾಗಿದೆ.
ಹಿಂಸಾಚಾರದಲ್ಲಿ ತೊಡಗಿರುವ ಗುರ್ಮಿತ್ ಬೆಂಬಲಿಗರಿಗೆ ಶಾಂತಿ ಕಾಪಾಡುವಂತೆ ರಾಷ್ಟ್ರಪತಿ ರಾಮನಾಥ್ ಕೋವಿಂದ್, ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ ರಾಜನಾಥ್ ಸಿಂಗ್, ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಸಹಿತ ಗಣ್ಯರು ಮನವಿ ಮಾಡಿದ್ದಾರೆ.

LEAVE A REPLY