ಡೆಂಗ್ಯೂ ಸೋಂಕು: ಪ್ರಿಯಾಂಕಾ ಗಾಂಧಿ ಆಸ್ಪತ್ರೆಗೆ ದಾಖಲು

ನವದೆಹಲಿ: ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ಡೆಂಗ್ಯೂ ಸೋಂಕಿನಿಂದ ಅಸ್ವಸ್ಥಗೊಂಡಿದ್ದು, ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ.
ಕೆಲವು ದಿನಗಳಿಂದ ಜ್ವರ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಪ್ರಿಯಾಂಕಾ ಗಾಂಧಿ ದೆಹಲಿಯ ಗಂಗಾರಾಮ್ ಆಸ್ಪತ್ರೆಗೆ ದಾಖಲಾಗಿದ್ದರು. ಈ ವೇಳೆ ತಪಾಸಣೆ ನಡೆಸಿದ ವೈದ್ಯರು ಪ್ರಿಯಾಂಕಾಗೆ ಡೆಂಗ್ಯೂ ಸೋಂಕು ತಗುಲಿರುವುದನ್ನು ಪತ್ತೆಹಚ್ಚಿದ್ದರು. ಪ್ರಿಯಾಂಕ ಚಿಕಿತ್ಸೆಗೆ ಸ್ಪಂದಿಸುತ್ತಿದ್ದು, ಚೇತರಿಸಿಕೊಳ್ಳುತ್ತಿದ್ದಾರೆ ಎಂದು ಆಸ್ಪತ್ರೆಯ ಮೂಲಗಳು ತಿಳಿಸಿವೆ. ಎಐಸಿಸಿ ಉಪಾಧ್ಯಕ್ಷ ರಾಹುಲ್ ಗಾಂಧಿ, ಪ್ರಿಯಾಂಕ ಪತಿ ರಾಬರ್ಟ್ ವಾದ್ರಾ ಆಸ್ಪತ್ರೆಗೆ ತೆರಳಿ ಆರೋಗ್ಯ ವಿಚಾರಿಸಿದ್ದಾರೆ.

LEAVE A REPLY