ಅಲೆಯ ಅಬ್ಬರಕ್ಕೆ ಸಿಲುಕಿದ ಮೀನುಗಾರಿಕಾ ದೋಣಿ : ಮೀನುಗಾರ ನಾಪತ್ತೆ

ಉಡುಪಿ: ಜಿಲ್ಲೆಯ ಹೆಜಮಾಡಿ ಬಳಿ ಸಮುದ್ರದಲ್ಲಿ ಅಲೆಯ ಅಬ್ಬರಕ್ಕೆ ಸಿಲುಕಿದ ಮೀನುಗಾರಿಕಾ ದೋಣಿ ಮಗುಚಿ ಮೀನುಗಾರನೋರ್ವ ನಾಪತ್ತೆಯಾಗುದ್ದು, ನಾಲ್ವರನ್ನು ರಕ್ಷಿಸಲಾಗಿದೆ.
ನಾಪತ್ತೆಯಾದ ಮೀನುಗಾರರನ್ನು ತರುಣ್ (25)ಎಂದು ಗುರುತಿಸಲಾಗಿದೆ.
ಪಡುಬಿದ್ರಿ ಸಮೀಪದ ಹೆಜಮಾಡಿ ಬಂದರಿನಿಂದ ಭಾನುವಾರ ಬೆಳಗ್ಗೆ ತರುಣ್ ಮತ್ತು ಇತರ ನಾಲ್ವರು ಮೀನುಗಾರಿಕಾ ದೋಣಿಯಲ್ಲಿ ಮೀನುಗಾರಿಕೆಗೆ ತೆರಳಿದ್ದರು. ಸಮುದ್ರದಲ್ಲಿ ಭಾರೀ ಅಲೆಯೊಂದು ದೋಣಿಗೆ ಬಡಿದಿದ್ದರಿಂದ ದೋಣಿ ಮಗುಚಿ ಬಿದ್ದಿದೆ. ಇದರಿಂದ ದೋಣಿಯಲ್ಲಿದ್ದ ಐವರು ಮೀನುಗಾರರು ನೀರಿಗೆ ಬಿದ್ದಿದ್ದಾರೆ. ಈ ವೇಳೆ ಸಮೀಪದಲ್ಲಿದ್ದ ಇನ್ನೊಂದು ಮೀನುಗಾರಿಕಾ ದೋಣಿಯಲ್ಲಿದ್ದವರು ನಾಲ್ವರನ್ನು ರಕ್ಷಿಸಿ ದಡಕ್ಕೆ ಕರೆತಂದಿದ್ದಾರೆ. ಆದರೆ ತರುಣ್ ನೀರಿನಲ್ಲಿ ಮುಳುಗಿ ನಾಪತ್ತೆಯಾಗಿದ್ದು, ಪಡುಬಿದ್ರಿ ಪೊಲೀಸರು ಪರಿಶೀಲನೆ ನಡೆಸುತ್ತಿದ್ದಾರೆ.

LEAVE A REPLY