ಗಣೇಶ ಮೂರ್ತಿ ವಿಸರ್ಜನೆ ವೇಳೆ ಕೆರೆಯಲ್ಲಿ ಮುಳುಗಿ ಯೋಧ ನಾಪತ್ತೆ

ಹಾಸನ: ಗಣೇಶ ಮೂರ್ತಿ ವಿಸರ್ಜನೆ ವೇಳೆ ಕೆರೆಯಲ್ಲಿ ಮುಳುಗಿ ಯೋಧನೊಬ್ಬ ನಾಪತ್ತೆಯಾಗಿರುವ ಘಟನೆ ತಾಲೂಕಿನ ದ್ಯಾವಲಾಪುರದಲ್ಲಿ ನಡೆದಿದೆ.
ಲೋಕೇಶ್ (24) ಮೃತ ಯೋಧ. ಭಾರತೀಯ ಸೇನೆಯಲ್ಲಿ ಕಳೆದ 5 ವರ್ಷಗಳಿಂದ ಸೇವೆ ಸಲ್ಲಿಸುತ್ತಿದ್ದ ಲೋಕೇಶ್ ಪ್ರಸ್ತುತ ಜಮ್ಮುವಿನಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದರು. ಹಬ್ಬಕ್ಕೆಂದು ರಜೆ ಮೇಲೆ ಊರಿಗೆ ಬಂದಿದ್ದರು.
ಭಾನುವಾರ ರಾತ್ರಿಯಿಂದ ಗ್ರಾಮದಲ್ಲಿ ನಡೆದ ಗಣೇಶ ಮೂರ್ತಿ ಮೆರವಣಿಗೆಯಲ್ಲಿ ಪಾಲ್ಗೊಂಡಿದ್ದ ಲೋಕೇಶ್ ಸೋಮವಾರ ಬೆಳಗ್ಗೆ ಗಣೇಶಮೂರ್ತಿ ವಿಸರ್ಜನೆ ವೇಳೆ ನೀರಿಗಿಳಿದ್ದರು ಎನ್ನಲಾಗಿದೆ. ಕೆರೆಯಲ್ಲಿ ಹೂಳು ತೆಗೆದಿದ್ದರಿಂದ ಆಳದ ಗುಂಡಿಗಳು ನಿರ್ಮಾಣವಾಗಿದ್ವು ಎನ್ನಲಾಗಿದ್ದು, ಈಜಲು ಸಾಧ್ಯವಾಗದೆ ಮುಳುಗಿ ನಾಪತ್ತೆಯಾಗಿದ್ದಾರೆ. ಅಗ್ನಿ ಶಾಮಕ ಸಿಬ್ಬಂದಿ ಕೆರೆಯಲ್ಲಿ ಶೋಧ ಕಾರ್ಯ ನಡೆಸುತ್ತಿದ್ದು, ಮೃತ ದೇಹ ಇನ್ನೂ ಪತ್ತೆಯಾಗಿಲ್ಲ.ದುದ್ದ ಠಾಣೆಯ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿದ್ದಾರೆ.

LEAVE A REPLY