ವಿಧಾನಸಭೆ ಚುನಾವಣೆಗೆ ಜೆಡಿಎಸ್ ತಯಾರಿ: ಪದಾಧಿಕಾರಿಗಳ ಪಟ್ಟಿ ಬಿಡುಗಡೆ

ಬೆಂಗಳೂರು: ವಿಧಾನಸಭೆ ಚುನಾವಣೆಯ ಅಖಾಡ ಎದುರಿಸಲು ಸಕಲ ಸಿದ್ಧತೆ ಮೂಲಕ ಕರ್ನಾಟಕ ಜೆಡಿಎಸ್ ಸಜ್ಜಾಗಿದ್ದು, ಇಂದು ಜೆಡಿಎಸ್ ವರಿಷ್ಠ ಎಚ್.ಡಿ. ದೇವೇಗೌಡ ಬೆಂಗಳೂರಿನಲ್ಲಿ 136 ಪದಾಧಿಕಾರಿಗಳ ಪಟ್ಟಿ ಬಿಡುಗಡೆ ಮಾಡಿದರು.
ನಗರದಲ್ಲಿ ಇಂದು ನಡೆದ ಸುದ್ದಿಗೋಷ್ಠಿಯಲ್ಲಿ ಪಟ್ಟಿ ಬಿಡುಗಡೆ ಮಾಡಿ ಮಾತನಾಡಿದ ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡ, ಎಚ್.ವಿಶ್ವನಾಥ್ ಅವರನ್ನು ಪ್ರಚಾರ ಸಮಿತಿ ಮತ್ತು ಚಿಂತನಾ ವಿಭಾಗಕ್ಕೆ ಅಧ್ಯಕ್ಷರನ್ನಾಗಿ ನೇಮಿಸಲಾಗಿದೆ ಎಂದರು.
೨೫ ರಾಜ್ಯಉಪಾಧ್ಯಕ್ಷರು, 26 ಪ್ರಧಾನ ಕಾರ್ಯದರ್ಶಿಗಳು, 12 ಕಾರ್ಯದರ್ಶಿಗಳು, 25 ಜಂಟಿ ಕಾರ್ಯದರ್ಶಿಗಳು ಮತ್ತು 47 ಸಂಘಟನಾ ಕಾರ್ಯದರ್ಶಿಗಳನ್ನು ನೇಮಿಸಲಾಗಿದೆ. ಸೆ. 22 ರಂದು ಬೆಂಗಳೂರಿನಲ್ಲಿ ರಾಜ್ಯಮಟ್ಟದ ಪರಿಶಿಷ್ಟ ಜಾತಿ, ಪಂಗಡದ ಸಮಾವೇಶ ನಡೆಸಲಾಗುತ್ತದೆ. ಅಕ್ಟೋಬರ್‌ನಲ್ಲಿ ಹಿಂದುಳಿದ ವರ್ಗ ಮತ್ತು ಅಲ್ಪ ಸಂಖ್ಯಾತರ ಸಮಾವೇಶ ಆಯೋಜಿಸಲಾಗುತ್ತದೆ ಎಂದರು.
ರಾಜ್ಯಾಧ್ಯಕ್ಷ ಎಚ್.ಡಿ. ಕುಮಾರಸ್ವಾಮಿ ಅವರು ಇಸ್ರೇಲ್ ಪ್ರವಾಸದಲ್ಲಿದ್ದು, ಅವರ ಅನುಪಸ್ಥಿತಿಯಲ್ಲಿಯೇ ಪದಾಧಿಕಾರಿಗಳ ಪಟ್ಟಿಯನ್ನು ಬಿಡುಗಡೆ ಮಾಡಿರುವುದು ವಿಶೇಷ.

LEAVE A REPLY