ರೈಲು ಹಳಿಗೆ ಕುಸಿದ ಮಣ್ಣು : ಮಂಗಳೂರು – ಬೆಂಗಳೂರು ರೈಲು ಸಂಚಾರ ವ್ಯತ್ಯಯ

ಮಂಗಳೂರು/ಪುತ್ತೂರು: ಮಂಗಳೂರು-ಬೆಂಗಳೂರು ರೈಲು ಮಾರ್ಗದಲ್ಲಿ ಸುಬ್ರಹ್ಮಣ್ಯ ರೈಲ್ವೇ ನಿಲ್ದಾಣ ಹಾಗೂ ಎಡಕುಮೇರಿ ರೈಲು ಮಾರ್ಗದ ಮಧ್ಯೆ ಮಂಗಳವಾರ ಮಧ್ಯಾಹ್ನ ಗುಡ್ಡ ಕುಸಿದು ಹಳಿಯ ಮೇಲೆ ಬಿದ್ದ ಪರಿಣಾಮವಾಗಿ ರೈಲು ಸಂಚಾರದಲ್ಲಿ ವ್ಯತ್ಯಯವಾಗಿದೆ.
ಮಂಗಳೂರು ಬೆಂಗಳೂರು ರೈಲು ಹಳಿಯ ಶಿರಾಡಿ ಘಾಟಿ ಪ್ರದೇಶದಲ್ಲಿ ಭಾರೀ ಮಳೆಯ ಕಾರಣದಿಂದ ಸುಬ್ರಹ್ಮಣ್ಯ ರೈಲ್ವೇ ರೋಡ್ ಹಾಗೂ ಎಡಕುಮೇರಿ ನಡುವಿನ ಪ್ರದೇಶದಲ್ಲಿ ಮಂಗಳವಾರ ಮಧ್ಯಾಹ್ನ ಗುಡ್ಡ ಕುಸಿದು ಹಳಿಯ ಮೇಲೆ ಮಣ್ಣು ಬಿದ್ದಿದೆ. ಹೀಗಾಗಿ ಮಂಗಳೂರು ಬೆಂಗಳೂರು ನಡುವೆ ಸಂಚರಿಸುವ ರೈಲು ಸಂಚಾರದಲ್ಲಿ ವ್ಯತ್ಯಯವಾಗಿದೆ. ಬೆಂಗಳೂರಿನಿಂದ ಮಂಗಳೂರಿಗೆ ಬರಬೇಕಾಗಿದ್ದ ರೈಲು ಇದೀಗ ಮತ್ತೆ ಸಕಲೇಶಪುರದ ಕಡೆಗೆ ತೆರಳಿದ್ದು ಪ್ರಯಾಣಿಕರಿಗೆ ಪರ್ಯಾಯ ವ್ಯವಸ್ಥೆಯನ್ನು ರೈಲ್ವೇ ಇಲಾಖೆ ಮಾಡಲಿದೆ. ಹಳಿಯ ಮೇಲೆ ಬಿದ್ದ ಮಣ್ಣು ತೆರವು ಕಾರ್ಯ ನಡೆಯುತ್ತಿದ್ದು ಶೀಘ್ರದಲ್ಲೇ ಸಂಚಾರ ವ್ಯವಸ್ಥೆ ಕಲ್ಪಿಸುವುದಾಗಿ ರೈಲ್ವೇ ಇಲಾಖೆ ಮೂಲಗಳು ತಿಳಿಸಿವೆ.

LEAVE A REPLY