ಗುಡ್ಡ ಕುಸಿತ: ಮಂಗಳೂರು-ಬೆಂಗಳೂರು ರೈಲು ಸಂಚಾರ ಇಂದು ಪುನರಾರಂಭ?

ಮಂಗಳೂರು: ಭಾರೀ ಮಳೆಯಿಂದಾಗಿ ಶಿರಾಡಿ ಘಾಟ್‌ನ ಎಡಕುಮೇರಿ ಪರಿಸರದಲ್ಲಿ ರೈಲು ಹಳಿಗೆ ಉರುಳಿಬಿದ್ದಿರುವ ಮಣ್ಣಿನ ತೆರವು ಕಾರ್ಯ ಭರದಿಂದ ಸಾಗಿದೆ.
ತೆರವು ಕಾರ್ಯ ಇಂದು ಪೂರ್ಣಗೊಳ್ಳುವ ನಿರೀಕ್ಷೆ ಹೊಂದಲಾಗಿದ್ದು, ಈ ಮಾರ್ಗವಾಗಿ ರೈಲು ಸಂಚಾರ ಪುನರಾರಂಭಗೊಳ್ಳುವುದೇ ಎಂಬುದನ್ನು ಇಲಾಖಾ ಅಧಿಕಾರಿಗಳು ಸ್ಪಷ್ಟಪಡಿಸಿಲ್ಲ.
ಕಳೆದ ನಾಲ್ಕು ದಿನಗಳಿಂದ ಈ ಭಾಗದಲ್ಲಿ ಭಾರಿ ಮಳೆಯಾಗುತ್ತಿದ್ದು, ಮಂಗಳವಾರ ಗುಡ್ಡ ಕುಸಿತ ಉಂಟಾಗಿದೆ. ಈ ಕಾರಣದಿಂದಾಗಿ ಮಂಗಳವಾರ ಯಶವಂತಪುರ- ಕಾರವಾರ ಎಕ್ಸ್‌ಪ್ರೆಸ್ ರೈಲಿನ ಮಾರ್ಗ ಬದಲಾವಣೆ ಮಾಡಲಾಗಿತ್ತು. ಕಾರವಾರದಿಂದ ಹೊರಟ ಕಾರವಾರ -ಯಶವಂತಪುರ ಎಕ್ಸ್‌ಪ್ರೆಸ್ ಶೋರ್ನೂರು, ಸೇಲಂ, ತಿರುಪತೂರ್ ಮಾರ್ಗದಲ್ಲಿ ಸಂಚರಿಸಿತ್ತು.

LEAVE A REPLY