ಡಿಕೆಶಿ ಆಪ್ತ ವಿಜಯ್ ಮುಳಗುಂದ ಮನೆಗೆ ಐಟಿ ಅಧಿಕಾರಿಗಳ ದಾಳಿ

ಬೆಂಗಳೂರು: ರಾಜ್ಯ ಇಂಧನ ಸಚಿವ ಡಿ.ಕೆ. ಶಿವಕುಮಾರ್ ಅವರ ಆಪ್ತ ವಿಜಯ್ ಮುಳಗುಂದ ಮನೆಗೆ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ಇಂದು ದಿಢೀರ್ ದಾಳಿ ನಡೆಸಿದ್ದಾರೆ.
ಮುಳಗುಂದ ಅವರಿಗೆ ಸೇರಿದ ಇಲ್ಲಿನ ಸುಬ್ರಹ್ಮಣ್ಯನಗರ ಹಾಗೂ ರಾಜಾಜಿನಗರದಲ್ಲಿರುವ ಮನೆಗೆ ದಾಳಿ ನಡೆಸಿರುವ ಅಧಿಕಾರಿಗಳು ದಾಖಲೆಗಳ ಪರಿಶೀಲನೆಯಲ್ಲಿ ತೊಡಗಿದ್ದಾರೆ.
ಕೆಲವು ದಿನಗಳ ಹಿಂದೆಯಷ್ಟೇ ಡಿಕೆ ಶಿವಕುಮಾರ್, ಅವರ ಕುಟುಂಬಸ್ಥರು ಮತ್ತು ಆಪ್ತರ ಮೇಲೆ ಐಟಿ ದಾಳಿ ನಡೆದಿತ್ತು. ಇದೀಗ ಅವರ ಆಪ್ತವಲಯದಲ್ಲೇ ಗುರುತಿಸಿಕೊಂಡಿರುವ ಮುಳಗುಂದ ಮನೆಯಲ್ಲಿ ದಾಳಿ ನಡೆದಿದೆ. ವಿಜಯ್ ಮುಳಗುಂದ, ಮಹಾರಾಷ್ಟ್ರದ ಮಾಜಿ ಮುಖ್ಯಮಂತ್ರಿ, ಕಾಂಗ್ರೆಸ್ ನಾಯಕ ವಿಲಾಸ್ ರಾವ್ ದೇಶ್ ಮುಖ್ ಅವರಿಗೂ ಆಪ್ತರಾಗಿದ್ದಾರೆ.

LEAVE A REPLY