ಮುಂಬೈಗೆ ಕೇಂದ್ರದಿಂದ ಎಲ್ಲಾ ಅಗತ್ಯ ನೆರವು: ಪ್ರಧಾನಿ ನರೇಂದ್ರ ಮೋದಿ

ಮುಂಬೈ: ಕಳೆದೆರಡು ದಿನಗಳಿಂದ ಮುಂಬೈ ಭಾಗದಲ್ಲಿ ಅಬ್ಬರಿಸುತ್ತಿರುವ ಮಳೆ ಕುರಿತಾಗಿ ಪ್ರಧಾನಿ ನರೇಂದ್ರ ಮೋದಿ, ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್ ಅವರಿಂದ ಮಾಹಿತಿ ಪಡೆದುಕೊಂಡಿದ್ದಾರೆ.
ಮಳೆಯಿಂದ ಆಗುವ ಅನಾಹುತಗಳ ಬಗ್ಗೆ ಎಚ್ಚರ ವಹಿಸಬೇಕು, ರಕ್ಷಣಾ ಮತ್ತು ಪರಿಹಾರ ಕಾರ್ಯಗಳನ್ನು ತ್ವರಿತಗತಿಯಲ್ಲಿ ಕೈಗೊಳ್ಳಬೇಕು, ಯಾವುದೇ ಪರಿಸ್ಥಿತಿ ಎದುರಿಸಲು ಆಡಳಿತ ಸಜ್ಜಾಗಿರಬೇಕು ಎಂದಿರುವ ಪ್ರಧಾನಿ ಮೋದಿ, ಕೇಂದ್ರ ಸರ್ಕಾರದಿಂದ ಅಗತ್ಯವಿರುವ ಎಲ್ಲಾ ರೀತಿಯ ನೆರವನ್ನು ನೀಡುವುದಾಗಿ ಭರವಸೆ ನೀಡಿದ್ದಾರೆ.
ಮುಂಬೈನಲ್ಲಿ ಭಾರಿ ಮಳೆ ಕಾಣಿಸಿಕೊಂಡಿರುವ ಹಿನ್ನೆಲೆಯಲ್ಲಿ ನಾಗರಿಕರು ಸುರಕ್ಷಿತ ಸ್ಥಳದಲ್ಲಿ ಉಳಿದುಕೊಳ್ಳುವಂತೆ ಹಾಗೂ ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ತೆಗೆದುಕೊಳ್ಳುವಂತೆ ಪ್ರಧಾನಿ ಮೋದಿ ಟ್ವೀಟರ್ ಮೂಲಕ ಕರೆ ನೀಡಿದ್ದಾರೆ.

LEAVE A REPLY