ಬೆಳಗಾವಿ ಮಹಾರಾಷ್ಟ್ರಕ್ಕೆ ಸೇರಿದ್ರೆ ಮೊದಲು ಜೈ ಮಹಾರಾಷ್ಟ್ರ ಅಂತಾರಂತೆ ಹೆಬ್ಬಾಳ್ಕರ್!

ಬೆಳಗಾವಿ: ಸುಪ್ರೀಂ ಕೋರ್ಟ್‌ನಲ್ಲಿರುವ ಗಡಿ ಸಮಸ್ಯೆ ಇತ್ಯರ್ಥಗೊಂಡು ಬೆಳಗಾವಿ ಮಹಾರಾಷ್ಟ್ರಕ್ಕೆ ಸೇರುವುದಾದರೆ ಎಲ್ಲರಿಗಿಂತ ಮೊದಲು ಮಹಾರಾಷ್ಟ್ರ ಧ್ವಜ ಹಿಡಿದು ಜೈ ಮಹಾರಾಷ್ಟ್ರ ಎಂದು ನಾನೇ ಘೋಷಣೆ ಕೂಗುವೆ ಎಂಬ ಕರ್ನಾಟಕ ಕಾಂಗ್ರೆಸ್ ನ ಮಹಿಳಾ ಘಟಕದ ಅಧ್ಯಕ್ಷೆ ಲಕ್ಷ್ಮೀ ಹೆಬ್ಬಾಳ್ಕರ್ ವಿವಾದಾತ್ಮಕ ಧ್ವನಿ ಹೊಂದಿರುವ ಆಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದ್ದು, ಕನ್ನಡ ಸಂಘಟನೆಗಳ ಕೆಂಗಣ್ಣಿಗೆ ಗುರಿಯಾಗಿದೆ.
ಜಿಲ್ಲೆಯ ಬಸರೀಕಟ್ಟಿ ಗ್ರಾಮದಲ್ಲಿ ಮೊನ್ನೆ ನಡೆದಿದ್ದ ಗಣೇಶೋತ್ಸವ ಸಮಾರಂಭದಲ್ಲಿ ಭಾಗವಹಿಸಿದ್ದ ಸಂದರ್ಭ ಮರಾಠಿ ಭಾಷಿಕರನ್ನು ಸೆಳೆಯಲು ಹೆಬ್ಬಾಳ್ಕರ್ ಈ ಮಾತುಗಳನ್ನಾಡಿದ್ದಾರೆ ಎನ್ನಲಾಗಿದೆ.
ಯಾರಿಗೂ ಈ ರೀತಿ ಹೇಳುವ ಧೈರ್ಯವಿಲ್ಲ, ಆದರೆ ನನಗೆ ಯಾರ ಭಯವಿಲ್ಲ. ನಾನು ಯಾರಿಗೂ ಹೆದರುವುದಿಲ್ಲ. ನಾನು ಹೆದರುವುದು ಆ ಭಗವಂತನಿಗೆ ಹಾಗೂ ನನ್ನ ತಂದೆ-ತಾಯಿಗೆ ಮಾತ್ರ. ನನಗೆ ಜಾತಿ, ಧರ್ಮ, ವ್ಯಕ್ತಿಯ ಬಗ್ಗೆ ಯಾವುದೇ ನಂಬಿಕೆಯಿಲ್ಲ. ಯಾರಿಂದ ನನಗೆ ಏನೂ ಆಗಬೇಕಿಲ್ಲ. ನನಗೆ ಬೆಳಗಾವಿ ಗ್ರಾಮೀಣ ಕ್ಷೇತ್ರದ ಅಭಿವೃದ್ಧಿ ಆಗಬೇಕಷ್ಟೇ ಎಂದು ಅವರು ಹೇಳಿರುವುದು ಆಡಿಯೋದಲ್ಲಿ ದಾಖಲಾಗಿದೆ.

LEAVE A REPLY