ಪತ್ರಕರ್ತೆ ಗೌರಿ ಲಂಕೇಶ್ ದುಷ್ಕರ್ಮಿಗಳ ಗುಂಡಿಗೆ ಬಲಿ

ಬೆಂಗಳೂರು: ಪತ್ರಕರ್ತೆ ಗೌರಿ ಲಂಕೇಶ್ ಅವರನ್ನು ಅಪರಿಚಿತ ದುಷ್ಕರ್ಮಿಗಳ ತಂಡವೊಂದು ಗುಂಡಿಟ್ಟು ಹತ್ಯೆ ಮಾಡಿದೆ.
ಬೆಂಗಳೂರಿನ ರಾಜರಾಜೇಶ್ವರಿ ನಗರದಲ್ಲಿರುವ ಅವರ ಮನೆಗೆ ನುಗ್ಗಿದ ಅಪರಿಚಿತರ ತಂಡ 7 ಸುತ್ತು ಗುಂಡಿನ ದಾಳಿ ನಡೆಸಿದ್ದು ತಿಳಿದುಬಂದಿದೆ.
ಗೌರಿ ಲಂಕೇಶ್ ಮನೆಯ ಹೊರಗೆ ನಿಂತಿದ್ದಾಗ ಮೂವರು ದುಷ್ಕರ್ಮಿಗಳು ತಂಡ ಈ ಕೃತ್ಯವೆಸಗಿದೆ ಎಂದು ಪಶ್ಚಿಮ ವಲಯ ಡಿಸಿಪಿ ಅನುಚೇತನ್ ತಿಳಿಸಿದ್ದಾರೆ. ಸ್ಥಳಕ್ಕೆ ಹಿರಿಯ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿದ್ದು, ಹಂತಕರಿಗಾಗಿ ಶೋಧ ಆರಂಭಗೊಂಡಿದೆ.

LEAVE A REPLY