ಮ್ಯಾನ್ಮಾರ್‌ನಲ್ಲಿ ಜನಾಂಗೀಯ ವಿದ್ವೇಷ: ಪ್ರಧಾನಿ ಮೋದಿ ಕಳವಳ

ನೈ ಪೀ ಟೌ: ಪ್ರಧಾನಿ ನರೇಂದ್ರ ಮೋದಿ ಇಂದು ನಾಯಕಿ ಆಂಗ್ ಸಾನ್ ಸೂ ಕೀ ಅವರನ್ನು ಭೇಟಿ ಮಾಡಿ ಉಭಯ ದೇಶಗಳ ನಡುವಿನ ವಿವಿಧ ವಿಚಾರಗಳ ಬಗ್ಗೆ ಸುದೀರ್ಘ ಚರ್ಚೆ ನಡೆಸಿದರು.
ಮ್ಯಾನ್ಮಾರ್ ಪ್ರವಾಸದಲ್ಲಿರುವ ಪ್ರಧಾನಿ ಮೋದಿ, ಅಲ್ಲಿನ ನಾಯಕಿ ಆಂಗ್ ಸಾನ್ ಸೂ ಕೀ ಅವರ ಜೊತೆ ನಡೆಸಿದ ಚರ್ಚೆಯಲ್ಲಿ ಜನಾಂಗೀಯ ವಿದ್ವೇಷದ ಬಗ್ಗೆ ಕಳವಳ ವ್ಯಕ್ತಪಡಿಸಿದರು.
ಇದಕ್ಕೂ ಮುನ್ನ ನಿನ್ನೆ ಮ್ಯಾನ್ಮಾರ್ ಅಧ್ಯಕ್ಷ ಯು ಹಿತ್ನ್ ಕ್ಯಾವ್ ಅವರನ್ನು ಭೇಟಿ ಮಾಡಿದ್ದ ಮೋದಿ, ಉಭಯ ರಾಷ್ಟ್ರಗಳ ನಡುವೆ ಭದ್ರತೆ, ಭಯೋತ್ಪಾದನಾ ನಿಗ್ರಹ, ವ್ಯಾಪಾರ ಮತ್ತು ಬಂಡವಾಳ ಹೂಡಿಕೆ, ಮೂಲ ಸೌಕರ್ಯಗಳ ಅಭಿವೃದ್ಧಿ, ಇಂಧನ ಕೇತ್ರದಲ್ಲಿನ ಸಹಕಾರ ಮತ್ತಷ್ಟು ಬಲಗೊಳಿಸುವ ಬಗ್ಗೆ ಚರ್ಚಿಸಿದ್ದರು.
ಮ್ಯಾನ್ಮಾರ್‌ನ ರೊಖೈನ್‌ನಲ್ಲಿ ರೋಹಿಂಗ್ಯ ಮುಸ್ಲಿಮರ ಮೇಲೆ ನಡೆಯುತ್ತಿರುವ ಜನಾಂಗೀಯ ಹಿಂಸಾಚಾರದ ಸಂದರ್ಭದಲ್ಲೇ ಪ್ರಧಾನಿ ಮೋದಿ ಈ ಪ್ರವಾಸ ಕೈಗೊಂಡಿದ್ದಾರೆ. ಹಿಂಸಾಚಾರದಿಂದಾಗಿ ರೋಹಿಂಗ್ಯ ಮುಸ್ಲಿಮರು ಭಾರತದತ್ತ ಸಾಮೂಹಿಕ ವಲಸೆ ಹೋಗುತ್ತಿರುವುದರಿಂದ ಉಂಟಾಗಿರುವ ಸಮಸ್ಯೆ ಬಗ್ಗೆಯೂ ಚರ್ಚೆ ನಡೆಸಲಾಯಿತು.

LEAVE A REPLY