ವಿಮ್ಸ್ ಆಸ್ಪತ್ರೆಯ ಆಪರೇಷನ್ ಥಿಯೇಟರ್ ಮೇಲ್ಛಾವಣಿ ದಿಢೀರ್ ಕುಸಿತ!

ಬಳ್ಳಾರಿ: ಇಲ್ಲಿನ ವಿಜಯನಗರದ ವಿಮ್ಸ್ ಆಸ್ಪತ್ರೆಯಲ್ಲಿ ಆಪರೇಷನ್ ಥಿಯೇಟರ್ ಮೇಲ್ಛಾವಣಿ ಕುಸಿದು ಬಿದ್ದ ಘಟನೆ ಇಂದು ಬೆಳಗ್ಗೆ ನಡೆದಿದೆ.
ಕಟ್ಟಡದ ಮೇಲ್ಛಾವಣಿ ಏಕಾಏಕಿ ಕುಸಿದು ಬಿದ್ದಿದ್ದು, ಅದೃಷ್ಟವಶಾತ್ ಆಪರೇಷನ್ ಥಿಯೇಟರ್‌ನಲ್ಲಿ ಯಾವುದೇ ಶಸ್ತ್ರ ಚಿಕಿತ್ಸೆ ನಡೆಯುತ್ತಿರಲಿಲ್ಲವಾದ್ದರಿಂದ ಅಪಾಯ ತಪ್ಪಿಹೋಗಿದೆ. ಘಟನೆಯ ಹಿನ್ನೆಲೆಯಲ್ಲಿ ಇಂದಿನ ಶಸ್ತ್ರಚಿಕಿತ್ಸೆಗಳನ್ನೆಲ್ಲ ರದ್ದು ಮಾಡಲಾಗಿದೆ.

LEAVE A REPLY