ದೇಶ ಮೊದಲ ಬುಲೆಟ್ ಟ್ರೈನ್ ಯೋಜನೆಗೆ ಮುನ್ನುಡಿ ಬರೆದ ಮೋದಿ-ಅಬೆ

ಅಹಮದಾಬಾದ್: ದೇಶದ ಮೊದಲ ಬುಲೆಟ್ ರೈಲು ಯೋಜನೆಗೆ ಇಂದು ಮುನ್ನುಡಿ ಬರೆಯಲಾಗಿದೆ.
ಅಹಮದಾಬಾದ್ ಮತ್ತು ಮುಂಬೈ ನಡುವಿನ ಬುಲೆಟ್ ಟ್ರೈನ್ ಯೋಜನೆಗೆ ಇಂದು ಅಹಮದಾಬಾದ್‌ನಲ್ಲಿ ಪ್ರಧಾನಿ ನರೇಂದ್ರ ಮೋದಿ ಹಾಗೂ ಜಪಾನ್ ಪ್ರಧಾನಿ ಶಿಂಬೊ ಅಬೆ ಶಂಕುಸ್ಥಾಪನೆ ನೆರವೇರಿಸಿದರು.
ಬರೋಬ್ಬರಿ 1.10 ಲಕ್ಷ ಕೋಟಿ ರೂಪಾಯಿ ವೆಚ್ಚದ ಯೋಜನೆ ಇದಾಗಿದ್ದು, 508 ಕಿ.ಮೀ. ದೂರದ ಮುಂಬೈ ಹಾಗೂ ಅಹಮದಾಬಾದ್ ನಡುವೆ ಈ ಬುಲೆಟ್ ಟ್ರೈನ್ ಓಡಾಡಲಿದೆ. ಜಪಾನ್ ಸಹಕಾರದೊಂದಿಗೆ ಭಾರತ ಈ ಯೋಜನೆಯನ್ನು ಕೈಗೆತ್ತಿಕೊಂಡಿದ್ದು, 75ನೇ ಸ್ವಾತಂತ್ರ್ಯೋತ್ಸವ ಆಚರಣೆ ನೆನಪಿಗಾಗಿ 2022ರ ಆಗಸ್ಟ್ ೧೫ರಂದು ದೇಶಕ್ಕೆ ಸಮರ್ಪಿಸುವ ಉದ್ದೇಶವನ್ನು ಮೋದಿ ಸರ್ಕಾರ ಹೊಂದಿದೆ. ಅಹಮದಾಬಾದ್‌ನಲ್ಲಿ ನಡೆದ ಈ ಕಾರ್ಯಕ್ರಮದಲ್ಲಿ ಗುಜರಾತ್ ಮುಖ್ಯಮಂತ್ರಿ ವಿಜಯ್ ರೂಪಾನಿ, ಮಹಾರಾಷ್ಟ್ರ ಸಿಎಂ ದೇವೇಂದ್ರ ಫಡ್ನಾವಿಸ್ ಹಾಗೂ ರೈಲ್ವೆ ಸಚಿವ ಪಿಯೂಶ್ ಗೋಯಲ್ ಸೇರಿದಂತೆ ಹಲವು ಗಣ್ಯರು ಉಪಸ್ಥಿತರಿದ್ದರು.

LEAVE A REPLY