ಕಲ್ಯಾಣಿ ಮೇಲೆ ಐಟಿ ಕಣ್ಣು: ಹತ್ತಕ್ಕೂ ಅಧಿಕ ಶಾಖೆಗಳಿಗೆ ಏಕಕಾಲಕ್ಕೆ ದಾಳಿ

ಬೆಂಗಳೂರು: ಬೆಂಗಳೂರು, ಹೈದ್ರಾಬಾದ್ ಹಾಗೂ ಚೆನ್ನೈನಲ್ಲಿ ಕಾರ್ಯಾಚರಸುವ ಕಲ್ಯಾಣಿ ಮೋಟಾರ್ಸ್, ಕಲ್ಯಾಣಿ ಡೆವಲಪರ್ಸ್ ಕಚೇರಿಗಳ ಮೇಲೆ ಆದಾಯ ತೆರಿಗೆ ಅಧಿಕಾರಿಗಳು ಇಂದು ದಾಳಿ ನಡೆಸಿದ್ದಾರೆ.
ಕಲ್ಯಾಣಿ ಮೋಟಾರ್ಸ್, ಡೆವಲಪರ್ಸ್‌ಗೆ ಸೇರಿದ ಹತ್ತಕ್ಕೂ ಹೆಚ್ಚು ಶಾಖೆಗಳ ಮೇಲೆ ಇಂದು ಬೆಳಗ್ಗೆ ಏಕಕಾಲಕ್ಕೆ ದಾಳಿ ನಡೆಸಿರುವ ಅಧಿಕಾರಿಗಳು ದಾಖಲೆಗಳ ಪರಿಶೀಲನೆಯಲ್ಲಿ ತೊಡಗಿದ್ದಾರೆ. ನೋಟ್ ರದ್ದುಗೊಂಡ ಬಳಿಕ ಸಂಸ್ಥೆ ಹೆಸರಿನಲ್ಲಿ ಅಕ್ರಮ ಹಣ ವರ್ಗಾವಣೆ ನಡೆದಿದೆ ಎಂಬ ಶಂಕೆಯ ಹಿನ್ನೆಲೆಯಲ್ಲಿ ಈ ದಾಳಿ ನಡೆದಿದೆ ಎನ್ನಲಾಗಿದ್ದು, ಹೆಚ್ಚಿ ಮಾಹಿತಿ ನಿರೀಕ್ಷಿಸಲಾಗುತ್ತಿದೆ.

LEAVE A REPLY