ಬ್ಲೂವೇಲ್ ಚಾಲೇಂಜ್ ನಿಷೇಧ ವಿಚಾರಣೆ : ಕೇಂದ್ರವನ್ನು ಪ್ರಶ್ನಿಸಿದ ಸುಪ್ರೀಂ

ಸಾಂದರ್ಭಿಕ ಚಿತ್ರ.

ಹೊಸದಿಲ್ಲಿ : ವಿಶ್ವದಾದ್ಯಂತ ಹಲವಾರು ಮಕ್ಕಳ ಸಾವಿಗೆ ಕಾರಣವಾಗಿರುವ ಬ್ಲೂವೇಲ್ ಚಾಲೇಂಜ್ ಗೇಮನ್ನು  ನಿಷೇಸುವಂತೆ ತಮಿಳುನಾಡಿನ  73 ವರ್ಷ ವಯಸ್ಸಿನ ವ್ಯಕ್ತಿಯೋರ್ವರು ಸುಪ್ರಿಂ ಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಸಿದಂತೆ ಸರ್ಕಾರ ಉತ್ತರ ನೀಡಬೇಕು ಎಂದು ಸುಪ್ರಿಂ ಕೋರ್ಟ್ ಸೂಚಿಸಿದೆ.
ಮುಖ್ಯ ನ್ಯಾಯಮೂರ್ತಿಗಳಾದ  ದೀಪಕ್ ಮಿಶ್ರಾ, ಎ. ಎಂ. ಖಾನ್ವಿಲ್ಕರ್ ಹಾಗೂ ಡಿ. ವಯ ಚಂದ್ರಚೂಡ್ ಅವರನ್ನು ಒಳಗೊಂಡ ನ್ಯಾಯಪೀಠವು ಮೂರು ವಾರಗಳ ಒಳಗಾಗಿ ಉತ್ತರ ನೀಡಬೇಕು ಎಂದು ಕೇಂದ್ರಕ್ಕೆ ಸೂಚಿಸಿದೆ. ಅಲ್ಲದೇ ಪ್ರಕರಣಕ್ಕೆ ಸಂಬಂಸಿದಂತೆ ಅಟಾರ್ನಿ ಜನರಲ್ ಕೆ. ಕೆ. ವೇಣುಗೋಪಾಲ್ ಅವರ ಸಹಾಯವನ್ನೂ ಕೋರಿದೆ.
ಬ್ಲೂವೇಲ್ ಆನ್‌ಲೈನ್ ಗೇಮ್ ನಿಷೇಸಬೇಕು ಎಂದು ಆಗ್ರಹಿಸಿ ಸೆ.11ರಂದು  ವಕೀಲರಾದ ಎನ್. ಎಸ್. ಪೊನ್ನಯ್ಯ ಅವರು ಅರ್ಜಿ ಸಲ್ಲಿಸಿದ್ದಾರೆ. ಅಲ್ಲದೇ ಜನಸಾಮಾನ್ಯರಲ್ಲಿ ಜಾಗೃತಿ ಮೂಡಿಸಬೇಕು ಎಂದೂ ಅವರು ಅರ್ಜಿಯಲ್ಲಿ ತಿಳಿಸಿದ್ದಾರೆ.

LEAVE A REPLY