ಸಂಪುಟದಿಂದ ಸಚಿವ ಜಾರ್ಜ್ ಕೈಬಿಡುವಂತೆ ಒತ್ತಾಯಿಸಿ ಬಿಜೆಪಿಯಿಂದ ಪ್ರತಿಭಟನೆ

ಬಳ್ಳಾರಿ : ಡಿವೈಎಸ್ಪಿ ಗಣಪತಿ ಆತ್ಮಹತ್ಯೆ ಪ್ರಕರಣವನ್ನು ಸುಪ್ರೀಂಕೋರ್ಟ್ ಸಿಬಿಐ ಗೆ ವಹಿಸಿರುವ ಹಿನ್ನೆಲೆಯಲ್ಲಿ ಸಚಿವ ಸ್ಥಾನದಿಂದ ಕೈ ಬಿಡುವಂತೆ ಆಗ್ರಹಿಸಿ ನಗರದಲ್ಲಿಂದು ಬಿಜೆಪಿ ಪ್ರತಿಭಟನೆ ನಡೆಸಿತು.
ಜಾರ್ಜ್ ಅವರು ಸಚಿವರಾಗಿರುವುದರಿಂದ ಪ್ರಕರಣದ ಸಾಕ್ಷಿಗಳನ್ನು ನಾಶ ಮಾಡುವ ಸಾಧ್ಯತೆ ಇದೆ. ಅಲ್ಲದೆ ಸಿಬಿಐ ತನಿಖೆಗೆ ಸಂಪೂರ್ಣ ಸಹಕಾರ ದೊರೆಯುವ ಸಾಧ್ಯತೆ ಇದ್ದು.ಪ್ರಾಮಾಣಿಕ ತನಿಖೆಗಾಗಿ ಜಾರ್ಜ್  ಅವರನ್ನು ಸಚಿವ ಸ್ಥಾನದಿಂದ ಕೈಬಿಡಬೇಕು, ಈ ಕೂಡಲೆ ರಾಜೀನಾಮೆ ಪಡೆಯಬೇಕು ಎಂದು ಆಗ್ರಹಿಸಿ ಬಳ್ಳಾರಿ ನಗರದ ಗಡಿಗಿ ಚೆನ್ನಪ್ಪ ವೃತ್ತದಿಂದ ಜಿಲ್ಲಾಧಿಕಾರಿ ಕಚೇರಿವರಗೆ ಕಾಂಗ್ರೆಸ್ ಮತ್ತು ಜಾರ್ಜ್ ವಿರುದ್ದ ಘೋಷಣೆ ಕೂಗುತ್ತ ಮನವಿ ಸಲ್ಲಿಸಿದರು.ಬಿಜೆಪಿ ಜಿಲ್ಲಾಧ್ಯಕ್ಷ್ಯ ಚನ್ನಬಸವನಗೌಡ ನೇತೃತ್ವದಲ್ಲಿ ಪ್ರತಿಭಟನೆ ನಡೆದು  ನೂರಾರು ಕಾರ್ಯಕರ್ತರು ಭಾಗಿಯಾದರು.

LEAVE A REPLY