ಸಚಿವ ಜಾರ್ಜ್ ರಾಜೀನಾಮೆಗೆ ಆಗ್ರಹಿಸಿ ಪ್ರತಿಭಟನೆ

ಬಾಗಲಕೋಟೆ : ಡಿವೈಎಸ್ಪಿ ಗಣಪತಿ ಆತ್ಮಹತ್ಯೆ ಪ್ರಕರಣವನ್ನು ಸುಪ್ರೀಂಕೋರ್ಟ್ ಸಿಬಿಐ ಗೆ ವಹಿಸಿರುವ ಹಿನ್ನೆಲೆ ಸಚಿವ ಕೆ.ಜಾರ್ಜ್ ಅವರು ರಾಜಿನಾಮೆಗೆ ಆಗ್ರಹಿಸಿ  ಬಾಗಲಕೋಟೆ ಜಿಲ್ಲಾ ಬಿಜೆಪಿ ವತಿಯಿ೦ದ ಪ್ರತಿಭಟನೆ ನಡೆಯಿತು. ಬಿಜೆಪಿ ಯುವ ಮೋರ್ಚಾ ಜಿಲ್ಲಾದ್ಯಕ್ಷ ರಾಜು ಮಾತನಾಡಿ ಸಚಿವ ಜಾರ್ಜ್ ಈ ಕೂಡಲೆ ರಾಜಿನಾಮೆ ನೀಡಬೇಕು ಎ೦ದು ಒತ್ತಾಯಿಸಿದರು. ಬಳಿಕ  ಉಪವಿಭಾಗಾಧಿಕಾರಿ ಮೂಲಕ ಸರ್ಕಾರಕ್ಕೆ ಮನವಿಪತ್ರ ಸಲ್ಲಿಸಲಾಯಿತು.

ದಾವಣಗೆರೆಯಲ್ಲೂ ಬಿಜೆಪಿ ಜಿಲ್ಲಾಧ್ಯಕ್ಷ ಯಶವಂತರಾವ್ ಜಾಧವ್ ನೇತೃತ್ವದಲ್ಲಿ ಪ್ರತಿಭಟನೆ ನಡೆಯಿತು.

LEAVE A REPLY