ಅಕ್ರಮ ಪಟಾಕಿ ಕಾರ್ಖಾನೆಯಲ್ಲಿ ಅಗ್ನಿ ಅವಘಡ: ಎಂಟು ಮಂದಿ ಸಾವು

ರಾಂಚಿ: ಅಕ್ರಮ ಪಟಾಕಿ ತಯಾರಿಕಾ ಕಾರ್ಖಾನೆಯೊಂದರಲ್ಲಿ ಸಂಭವಿಸಿದ ಅಗ್ನಿ ಅವಘಡದಲ್ಲಿ ಕನಿಷ್ಟ ಎಂಟು ಮಂದಿ ಸಾವನ್ನಪ್ಪಿ 30ಕ್ಕೂ ಅಧಿಕ ಮಂದಿ ಗಾಯಗೊಂಡಿರುವ ಘಟನೆ ಜಾರ್ಖಂಡ್ ಭಾನುವಾರ ತಡರಾತ್ರಿ ನಡೆದಿದೆ.
ಜಾರ್ಖಂಡ್‌ನ ಕುಮಾರ್ ದುಬಿಯಲ್ಲಿ ಈ ಪಟಾಕಿ ಕಾರ್ಖಾನೆ ಕಾರ್ಯಾಚರಿಸುತ್ತಿತ್ತು. ನಿನ್ನೆ ರಾತ್ರಿ ದುರಂತ ಸಂಭವಿಸಿದ್ದು, ಬೆಂಕಿಯ ಕೆನ್ನಾಲಿಗೆ ಕಂಡು ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದು, ಸ್ಥಳಕ್ಕೆ ಧಾವಿಸಿಬಂದ 5ಕ್ಕೂ ಹೆಚ್ಚು ಅಗ್ನಿಶಾಮಕ ವಾಹನಗಳು ಬೆಂಕಿ ನಂದಿಸುವ ಕಾರ್ಯಾಚರಣೆಯಲ್ಲಿ ತೊಡಗಿವೆ. ಹೆಚ್ಚಿ ವಿವರ ನಿರೀಕ್ಷಿಸಲಾಗುತ್ತಿದೆ.

LEAVE A REPLY