ಕರ್ನಾಟಕ ಪ್ರಜ್ಞಾವಂತ ಜನತಾ ಪಕ್ಷಕ್ಕೆ ನಟ ಉಪೇಂದ್ರ ಗುಡ್ ಬೈ!

ಬೆಂಗಳೂರು: ಕರ್ನಾಟಕ ಪ್ರಜ್ಞಾವಂತ ಜನತಾ ಪಕ್ಷಕ್ಕೆ ನಟ ಉಪೇಂದ್ರ ಗುಡ್ ಬೈ ಹೇಳಿದ್ದಾರೆ.
ಮಂಗಳವಾರ ರುಪ್ಪೀಸ್ ರೆಸಾರ್ಟ್ ನಲ್ಲಿ ಬೆಂಬಲಿಗರ ಜತೆ ಸಭೆ ನಡೆಸಿದ ಬಳಿಕ ಸುದ್ದಿಗಾರರ ಜತೆ ಮಾತನಾಡಿದ ಅವರು, ನಾನು ಪಕ್ಷಕ್ಕೆ ರಾಜೀನಾಮೆ ಕೊಟ್ಟಿದ್ದೇನೆ. ಇಂದಿನಿಂದ ನನಗೂ, ಕೆಪಿಜೆಪಿಗೂ ಯಾವುದೇ ಸಂಬಂಧವಿಲ್ಲ. ನಾವೆಲ್ಲರೂ ಸೇರಿ ಒಮ್ಮತದ ತೀರ್ಮಾನಕ್ಕೆ ಬಂದಿರುವುದಾಗಿ ಹೇಳಿದ್ದಾರೆ. ಇದೇ ಪ್ರಜಾಕೀಯ ಉದ್ದೇಶ ಇಟ್ಟುಕೊಂಡು ಶೀಘ್ರದಲ್ಲಿಯೇ ಹೊಸ ಪಕ್ಷ ಸ್ಥಾಪನೆ ಮಾಡುತ್ತೇವೆ ಎಂದೂ ಅವರು ಈ ಸಂದರ್ಭ ಹೇಳಿದ್ದಾರೆ.
ಕೆಪಿಜೆಪಿ ಪ್ರಧಾನ ಕಾರ್ಯದರ್ಶಿ ಮಹೇಶ್ ಗೌಡ ಹಾಗೂ ಉಪೇಂದ್ರ ನಡುವೆ ಸೀಟು ಹಂಚಿಕೆ ವಿಷಯದಲ್ಲಿ ಭಿನ್ನಾಭಿಪ್ರಾಯ ಮೂಡಿತ್ತು. ಈ ಹಿನ್ನೆಲೆಯಲ್ಲಿ ಸೋಮವಾರ ಮಹೇಶ್ ಗೌಡ ಹಾಗೂ ಉಪೇಂದ್ರ ಪತ್ರಿಕಾಗೋಷ್ಠಿ ನಡೆಸಿದ್ದರು. ಅದಾದ ನಂತರ ಈ ಹೊಸ ಬೆಳವಣಿಗೆ ನಡೆದಿದೆ.

LEAVE A REPLY