ಮೇಘಾಲಯ ಮುಖ್ಯಮಂತ್ರಿಯಾಗಿ ಸಂಗ್ಮಾ ಪ್ರಮಾಣ ವಚನ ಸ್ವೀಕಾರ

ಶಿಲ್ಲಾಂಗ್: ಮೇಘಾಲಯ ಮುಖ್ಯಮಂತ್ರಿಯಾಗಿ ನ್ಯಾಷನಲ್ ಪೀಪಲ್ಸ್ ಪಾರ್ಟಿ(ಎನ್‌ಪಿಪಿ) ಮುಖ್ಯಸ್ಥ ಕಾನ್ರಾಡ್ ಸಂಗ್ಮಾ ಮಂಗಳವಾರ ಪ್ರಮಾಣ ವಚನ ಸ್ವೀಕರಿಸಿದರು.
ರಾಜಧಾನಿ ಶಿಲ್ಲಾಂಗ್‌ನ ರಾಜಭವನದಲ್ಲಿ ನಡೆದ ಸರಳ ಸಮಾರಂಭದಲ್ಲಿ ರಾಜ್ಯಪಾಲ ಗಂಗಾ ಪ್ರಸಾದ್ ಅವರು ಕಾನ್ರಾಡ್ ಹಾಗೂ ೧೧ ಮಂದಿ ಸಚಿವರಿಗೆ ಪ್ರತಿಜ್ಞಾ ವಿಧಿ ಬೋಧಿಸಿದರು. ಈ ಸಂದರ್ಭ ಗೃಹ ಸಚಿವ ರಾಜನಾಥ್ ಸಿಂಗ್, ಬಿಜೆಪಿ ಅಧ್ಯಕ್ಷ ಅಮಿತ್ ಶಾ, ಮಣಿಪುರ ಮುಖ್ಯಮಂತ್ರಿ ಎನ್. ಬಿರೇನ್ ಸಿಂಗ್, ಬಿಜೆಪಿ ರಾಷ್ಟೀಯ ವಕ್ತಾರರಾದ ನಳಿನ್ ಕೊಹ್ಲಿ ಸೇರಿದಂತೆ ಹಲವು ಗಣ್ಯರು ಉಪಸ್ಥಿತರಿದ್ದರು.

LEAVE A REPLY