ಲೋಕಾಯುಕ್ತರ ಕೊಲೆಗೆ ಯತ್ನಿಸಿದ ಆರೋಪಿಗೆ ಐದು ದಿನಗಳ ಪೊಲೀಸ್ ಕಸ್ಟಡಿ

ಬೆಂಗಳೂರು: ರಾಜ್ಯವನ್ನೇ ಬೆಚ್ಚಿಬೀಳಿಸಿದ್ದ ಲೋಕಾಯುಕ್ತ ನ್ಯಾಯಮೂರ್ತಿ ವಿಶ್ವನಾಥ್ ಶೆಟ್ಟಿ ಕೊಲೆಯತ್ನ ಪ್ರಕರಣಕ್ಕೆ ಸಂಬಂಧಿಸಿ ಬಂಧಿತ ಆರೋಪಿ ತೇಜರಾಜ್ ಶರ್ಮನ್ನು ಹೆಚ್ಚಿನ ವಿಚಾರಣೆಗಾಗಿ ಐದು ದಿನಗಳ ಪೊಲೀಸ್ ಕಸ್ಟಡಿಗೆ ನೀಡಲಾಗಿದೆ.
ಬುಧವಾರ ತಡರಾತ್ರಿ ಮೂರು ಗಂಟೆಗೆ ಆರೋಪಿ ತೇಜರಾಜ್‌ನನ್ನು ನ್ಯಾಯಾಧೀಶರ ಮುಂದೆ ಹಾಜರುಪಡಿಸಲಾಗಿತ್ತು. ವಿಚಾರಣೆ ನಡೆಸಿದ ನ್ಯಾಯಾಧೀಶರು ಈ ಆದೇಶ ನೀಡಿದ್ದಾರೆ.
ಬಿಗಿ ಬಂದೋಬಸ್ತ್
ಲೋಕಾಯುಕ್ತ ನ್ಯಾಯಮೂರ್ತಿ ವಿಶ್ವನಾಥ್ ಶೆಟ್ಟಿ ಮೇಲೆ ನಡೆದ ದಾಳಿ ಹಿನ್ನೆಲೆಯಲ್ಲಿ ಲೋಕಾಯುಕ್ತ ಕಚೇರಿಗೆ ಹೆಚ್ಚಿನ ಪೊಲೀಸ್ ಭದ್ರತೆ ಒದಗಿಸಲಾಗಿದೆ. ಲೋಕಾಯುಕ್ತ ಕಚೇರಿಯಲ್ಲಿ ಕೆಟ್ಟುಹೋಗಿರುವ ಮೆಟಲ್ ಡಿಟೆಕ್ಟರ್‌ನ ದುರಸ್ತಿ ಕಾರ್ಯ ಆರಂಭಗೊಂಡಿದೆ.

LEAVE A REPLY