ರಾಸಾಯನಿಕ ಕಾರ್ಖಾನೆಯಲ್ಲಿ ಪ್ರಬಲ ಸ್ಫೋಟ: ನಾಲ್ವರ ಸಜೀವ ದಹನ

ಮುಂಬೈ: ಇಲ್ಲಿನ ಪಲ್‌ಘರ್‌ನ ತಾರಾಪುರದಲ್ಲಿರುವ ಖಾಸಗಿ ರಾಸಾಯನಿಕ ಕಾರ್ಖಾನೆಯೊಂದರಲ್ಲಿ ಸಂಭವಿಸಿದ ಭಾರೀ ಬೆಂಕಿ ಅನಾಹುತದಲ್ಲಿ ಕನಿಷ್ಟ ನಾಲ್ವರು ಮೃತಪಟ್ಟು ಹಲವರು ಗಂಭೀರ ಗಾಯಗೊಂಡಿದ್ದಾರೆ.
ಘಟನೆ ಗುರುವಾರ ಮಧ್ಯರಾತ್ರಿ ನಡೆದಿದೆ. ಬೆಂಕಿ ಅನಾಹುತದ ಜೊತೆಗೆ ಭಾರೀ ತೀವ್ರತೆಯ ಸ್ಪೋಟವೂ ಸಂಭವಿಸಿದ್ದು, ಸ್ಫೋಟದ ಸದ್ದು ೧೦ ಕಿ.ಮೀ. ವ್ಯಾಪ್ತಿವರೆಗೆ ಕೇಳಿ ಬಂದಿತ್ತು.
ಮುಂಬೈನಿಂದ ೧೫೦ ಕಿ.ಮೀ.ದೂರದಲ್ಲಿರುವ ಈ ರಾಸಾಯನಿಕ ತಯಾರಿಕಾ ಘಟಕದಲ್ಲಿ ನಿನ್ನೆ ತಡರಾತ್ರಿ ೧೧.೧೫ರಲ್ಲಿ ಸಣ್ಣದಾಗಿ ಕಾಣಿಸಿಕೊಂಡ ಬೆಂಕಿಯಿಂದ ಭಾರೀ ಸ್ಫೋಟ ಸಂಭವಿಸಿ ಅಕ್ಕಪಕ್ಕದ ಕಟ್ಟಡಗಳಿಗೂ ವ್ಯಾಪಿಸಿದೆ. ಸ್ಥಳಕ್ಕೆ ಧಾವಿಸಿದ ಅಗ್ನಿಶಾಮಕ ಸಿಬ್ಬಂದಿ ಮತ್ತು ರಕ್ಷಣಾ ಕಾರ್ಯಕರ್ತರು ಕಟ್ಟಡಗಳ ಒಳಗೆ ಸಿಲುಕಿದ್ದ ಜನರನ್ನು ಸುರಕ್ಷಿತ ಸ್ಥಳಗಳಿಗೆ ಕರೆದೊಯ್ದರು. ಸಾವಿನ ಸಂಖ್ಯೆ ಇನ್ನಷ್ಟು ಹೆಚ್ಚಳವಾಗುವ ಸಾಧ್ಯತೆಯಿದೆ.

LEAVE A REPLY