ಐದು ವರ್ಷದ ಬಾಲಕಿ ಮೇಲೆ ತಂಡದಿಂದ ಅತ್ಯಾಚಾರ

ಥಾಣೆ: ಕಾಮಾಂಧರ ಗುಂಪೊಂದು ಐದು ವರ್ಷದ ಬಾಲಕಿ ಮೇಲೆ ಅತ್ಯಾಚಾರವೆಸಗಿದ ಅಮಾನವೀಯ ಘಟನೆ ಮಹಾರಾಷ್ಟ್ರದ ಥಾಣೆಯಲ್ಲಿ ನಡೆದಿದೆ.
ಇಲ್ಲಿನ ರಸ್ತೆ ಬಳಿಯಲ್ಲಿ ಅಳುತ್ತಾ ನಿಂತಿದ್ದ ಬಾಲಕಿಯನ್ನು ಕಂಡು ಸ್ಥಳೀಯರೊಬ್ಬರು ವಿಚಾರಿಸಿ ಪೊಲೀಸ್ ಠಾಣೆಗೆ ಕರೆದೊಯ್ದಿದ್ದರು. ಪೊಲೀಸರು ವಿಚಾರಣೆ ನಡೆಸಿ ವೈದ್ಯಕೀಯ ತಪಾಸಣೆ ನಡೆಸಿದಾಗ ಬಾಲಕಿಯ ಮೇಲೆ ಅತ್ಯಾಚಾರ ನಡೆದಿರುವುದು ಬೆಳಕಿಗೆ ಬಂದಿದೆ. ಈ ಬಗ್ಗೆ ಐಪಿಸಿ ಸೆಕ್ಷನ್ ಅಡಿಯಲ್ಲಿ ಅತ್ಯಾಚಾರ ಹಾಗೂ ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ (ಪೊಸ್ಕೊ) ಅಡಿ ದೂರು ದಾಖಲಿಸಿಕೊಂಡಿರುವ ಪೊಲೀಸರು ಕಾಮಾಂಧರಿಗಾಗಿ ಶೋಧ ಆರಂಭಿಸಿದ್ದಾರೆ.

LEAVE A REPLY