ತ್ರಿವೇಣಿ ಸಂಗಮದಲ್ಲಿ ಆವಘಡ: ನದಿಯಲ್ಲಿ ಮುಳುಗಿ ಯುವಕರಿಬ್ಬರು ಸಾವು

ಟಿ.ನರಸೀಪುರ: ಇಲ್ಲಿನ ತ್ರಿವೇಣಿ ಸಂಗಮದಲ್ಲಿ ನದಿಗೆ ಇಳಿದ ಇಬ್ಬರು ಯುವಕರು ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ.
ತಾಲೂಕಿನ ಬನ್ನಹಳ್ಳಿಹುಂಡಿ ಗ್ರಾಮದ ಪ್ರಮೋದ್ (೧೨), ತೇಜೇಂದ್ರಪ್ರಸಾದ್ (೧೭) ಮೃತ ದುರ್ದೈವಿಗಳು ಎಂದು ಗುರುತಿಸಲಾಗಿದೆ.
ಯುಗಾದಿ ಹಬ್ಬದ ಹಿನ್ನೆಲೆಯಲ್ಲಿ ತಿರುಮಕೂಡಲಿನ ತ್ರಿವೇಣಿ ಸಂಗಮದ ನದಿಗೆ ಸ್ನಾನ ಮಾಡಲು ಇಳಿದ ಈ ಯುವಕರು ಈಜು ಬಾರದೇ ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ ಎಂದು ಹೇಳಲಾಗಿದೆ.

LEAVE A REPLY