ಕಾಂಗ್ರೆಸ್ ಧುರೀಣ, ಬೇಲೂರು ಶಾಸಕ ವೈ.ಎನ್. ರುದ್ರೇಶ್‌ಗೌಡ ಇನ್ನಿಲ್ಲ

ಬೇಲೂರು: ಕಾಂಗ್ರೆಸ್‌ನ ಹಿರಿಯ ನಾಯಕ, ಬೇಲೂರು ಶಾಸಕ ವೈ.ಎನ್. ರುದ್ರೇಶ್‌ಗೌಡ (57) ಶನಿವಾರ ವಿಧಿವಶರಾಗಿದ್ದಾರೆ.
ಕಳೆದ ಹಲವು ತಿಂಗಳಿನಿಂದ ಅನಾರೋಗ್ಯಕ್ಕೆ ಒಳಗಾಗಿದ್ದ ಅವರ ದೇಹಸ್ಥಿತಿ ಶುಕ್ರವಾರ ವಿಶಮಿಸಿದ್ದ ಹಿನ್ನೆಲೆಯಲ್ಲಿ ಬೆಂಗಳೂರಿನ ಆಸ್ಪತ್ರೆಗೆ ಸೇರಿಸಲಾಗಿತ್ತು. ಚಿಕಿತ್ಸೆಗೆ ಸ್ಪಂದಿಸದೆ ಅವರು ಇಂದು ಬೆಳಿಗ್ಗೆ ಕೊನೆಯುಸಿರೆಳೆದಿದ್ದಾರೆ ಎಂದು ಕುಟುಂಬ ಮೂಲಗಳು ತಿಳಿಸಿವೆ.
ನಿಷ್ಟಾವಂತ ಕಾರ್ಯಕರ್ತ
ಕಾಂಗ್ರೆಸ್‌ನಲ್ಲಿ ಸುಮಾರು ಮೂರು ದಶಕಕ್ಕೂ ಹೆಚ್ಚು ಕಾಲ ನಿಷ್ಠಾವಂತರಾಗಿ ದುಡಿದಿದ್ದ ರುದ್ರೇಶ್, ಹಾಸನ ಜಿಲ್ಲೆಯಲ್ಲಿ ತಮ್ಮದೇ ಆದ ವರ್ಚಸ್ಸು ಹೊಂದಿದ್ದರು. ಸಂಸದರಾಗಿ, ಶಾಸಕರಾಗಿ ಹಲವಾರು ಜನಪರ ಕಾರ್ಯಗಳನ್ನು ಮಾಡಿದ್ದರು. ಅವರ ಅಕಾಲಿಕ ನಿಧನಕ್ಕೆ ವಿವಿಧ ಪಕ್ಷಗಳ ನಾಯಕರು ದಿಗ್ಭ್ರಮೆ ವ್ಯಕ್ತಪಡಿಸಿದ್ದಾರೆ.
ಅಂತಿಮ ದರ್ಶನ
ರುದ್ರೇಶ್ ಪಾರ್ಥೀವ ಶರೀರ ಶನಿವಾರ ಬೆಂಗಳೂರಿನಿಂದ ಬೇಲೂರಿಗೆ ಬರಲಿದ್ದು, ಇಲ್ಲಿನ ಸರ್ಕಾರಿ ಪದವಿ ಪೂರ್ವ ಕಾಲೇಜು ಆವರಣದಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಕಲ್ಪಿಸಲಾಗಿದೆ ಎಂದು ಕುಟುಂಬದ ಮೂಲಗಳು ತಿಳಿಸಿವೆ.

LEAVE A REPLY