ನಾಡ ಅಧಿದೇವತೆ ಚಾಮುಂಡೇಶ್ವರಿ ತಾಯಿಗೆ ರಾಗಾ ವಿಶೆಷ ಪೂಜೆ

ಮೈಸೂರು: ಎರಡು ದಿನಗಳ ಪ್ರವಾಸಕ್ಕಾಗಿ ಹಳೇ ಮೈಸೂರು ಭಾಗಕ್ಕೆ ಆಗಮಿಸಿರುವ ಎಐಸಿಸಿ ಆಧ್ಯಕ್ಷ ರಾಹಲ್ ಗಾಂದಿ, ಶನಿವಾರ ನಾಡ ಅಧಿದೇವತೆ ಚಾಮುಂಡೇಶ್ವರಿ ತಾಯಿಗೆ ವಿಶೇಷ ಪೂಜೆ ಸಲ್ಲಿಸಿದರು.
ಅಧ್ಯಕ್ಷರಾದ ಮೇಲೆ ಮೈಸೂರಿಗೆ ಅವರ ಮೊದಲ ಭೇಟಿ ಇದಾಗಿದೆ. ಇಂದಿನಿಂದ ಎರಡು ದಿನಗಳ ಕಾಲ ರಾಹುಲ್, ಹಳೇ ಮೈಸೂರು ಭಾಗಗಳಾದ ಮೈಸೂರು, ಮಂಡ್ಯ ಹಾಗೂ ಚಾಮರಾಜನಗರ ಜಿಲ್ಲೆಗಳಲ್ಲಿ ಜನಾಶೀರ್ವಾದ ಯಾತ್ರೆಯ ಮೂಲಕ ಪ್ರಚಾರ ನಡೆಸಲಿದ್ದಾರೆ. ಶನಿವಾರ ಬೆಳಗ್ಗೆ ವಿಶೇಷ ವಿಮಾನದ ಮೂಲಕ ದೆಹಲಿಯಿಂದ ಮೈಸೂರಿನ ಮಂಡಕಳ್ಳಿ ವಿಮಾನ ನಿಲ್ದಾಣಕ್ಕೆ ಆಗಮಿಸಿದ ರಾಹುಲ್‌ಗೆ ಸಿಎಂ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಪರಮೇಶ್ವರ, ರಾಜ್ಯ ಚುನಾವಣಾ ಉಸ್ತುವಾರಿ ಸೇರಿದಂತೆ ಸಚಿವ ಸಂಪುಟದ ಸದಸ್ಯರು ಸ್ವಾಗತಕೋರಿದರು.

LEAVE A REPLY