ಸಿಲಿಕಾನ್ ಸಿಟಿಯಲ್ಲಿ ಮಹಿಳೆಯ ಬರ್ಬರ ಕೊಲೆ: ಆತ್ಯಾಚಾರ ಶಂಕೆ

ಬೆಂಗಳೂರು: ರಾಜ್ಯ ರಾಜಧಾನಿಯ ಹೊರವಲಯದಲ್ಲಿ ಮಹಿಳೆಯೊಬ್ಬರನ್ನು ಭೀಕರವಾಗಿ ಕೊಲೆ ಮಾಡಲಾಗಿದ ಘಟನೆ ಸೋಮವಾರ ಬೆಳಕಿಗೆ ಬಂದಿದೆ.
ಕೊಲೆಗೂ ಮುನ್ನ ಮಹಿಳೆಯನ್ನು ಅತ್ಯಾಚಾಗೈಯಲಾಗಿದೆ ಎಂದು ಪೊಲೀಸರು ಶಂಕಿಸಿದ್ದಾರೆ.
ಬ್ಯಾಡರಹಳ್ಳಿಯ ಪೈಪ್ ಲೇನ್ ಬಳಿ ನಿನ್ನೆ ರಾತ್ರಿ ಈ ಘಟನೆ ನಡೆದಿದೆ ಎಂದು ಅಂದಾಜಿಸಲಾಗಿದೆ. ಮೃತ ಮಹಿಳೆ ೩೦ ರಿಂದ ೩೫ ವರ್ಷದವರಾಗಿದ್ದು, ಕಾಮುಕರು ಈಕೆಯನ್ನು ಕಲ್ಲಿನಿಂದ ಹೊಟ್ಟೆ ಮತ್ತು ತಲೆಗೆ ಹೊಡೆದು ಭೀಕರವಾಗಿ ಕೊಲೆಗೈದಿದ್ದಾರೆ.
ಸ್ಥಳೀಯರು ಮೃತದೇಹ ಕಂಡು ಪೊಲೀಸರಿಗೆ ಮಾಹಿತಿ ನೀಡಿದ್ದು, ಬ್ಯಾಡರಹಳ್ಳಿ ಪೊಲೀಸರು ತನಿಖೆ ಕೈಗೆತ್ತಿಕೊಂಡಿದ್ದಾರೆ.

LEAVE A REPLY