ಸಂಸದರಿದ್ದ ವಿಮಾನಕ್ಕೆ ಬಾಂಬ್ ಬೆದರಿಕೆ: ರಾಷ್ಟ್ರ ರಾಜಧಾನಿಯಲ್ಲಿ ಆತಂಕ ಸೃಷ್ಟಸಿದ ಫೋನ್ ಕರೆ

ಸಾಂರ್ಭಿಕ ಚಿತ್ರ.

ನವದೆಹಲಿ: ಪಶ್ಚಿಮ ಬಂಗಾಳದ ಸಂಸದರಾದ ಸಿಸಿರ್ ಅಧಿಕಾರಿ, ಕಕೋಲಿ ಘೋಷ್ ದಸ್ತಿದಾರ್, ಶಾಸಕ ಸುವೇಂದು ಅಧಿಕಾರಿ ಸೇರಿದಂತೆ ಹಲವು ಗಣ್ಯರುಗಳಿದ್ದ ವಿಮಾನಕ್ಕೆ ಬಾಂಬ್ ಬೆದರಿಕೆ ಕರೆ ಬಂದ ಹಿನ್ನೆಲೆಯಲ್ಲಿ ಕೆಲಕಾಲ ಆತಂಕದ ಸ್ಥಿತಿ ನಿರ್ಮಾಣವಾದ ಘಟನೆ ರಾಷ್ಟ್ರ ರಾಜಧಾನಿಯಲ್ಲಿ ಬುಧವಾರ ನಡೆಯಿತು.
ದೆಹಲಿಯಿಂದ ಕೋಲ್ಕತ್ತಾಗೆ ಹಾರಾಟ ನಡೆಸಲು ಇಲ್ಲಿನ ಇಂದಿರಾ ಗಾಂಧಿ ವಿಮಾನ ನಿಲ್ದಾಣದಲ್ಲಿ ಸಿದ್ಧವಾಗಿದ್ದ ಎಐ-೦೨೦ ವಿಮಾನದಲ್ಲಿ ಬಾಂಬ್ ಇರುವುದಾಗಿ ಕರೆ ಬಂದಿದ್ದು, ಮುಂಬೈನಲ್ಲಿರುವ ಏರ್ ಇಂಡಿಯಾ ಕಾಲ್ ಸೆಂಟರ್‌ಗೆ ವ್ಯಕ್ತಿಯೋರ್ವ ಕರೆ ಮಾಡಿ, ವಿಮಾನದಲ್ಲಿ ಬಾಂಬ್ ಇಡಲಾಗಿದೆ ಎಂದು ಹೇಳಿದ್ದ. ತಕ್ಷಣ ಅಲರ್ಟ್ ಆದ ಅಧಿಕಾರಿಗಳು ದೆಹಲಿಗೆ ಮಾಹಿತಿ ಮುಟ್ಟಿಸಿ, ವಿಮಾನದಲ್ಲಿದ್ದ ಎಲ್ಲಾ ಪ್ರಯಾಣಿಕರನ್ನು ಕೆಳಗಿಳಿಸಿ ತೀವ್ರ ತಪಾಸಣೆ ನಡೆಸಿದ್ದು, ಇದಾದ ಬಳಿಕ ಇದೊಂದು ಹುಸಿ ಬಾಂಬ್ ಕರೆ ಎಂದು ಗೊತ್ತಾಗಿದೆ. ಬಳಿಕ ಎಲ್ಲಾ ಪ್ರಯಾಣಿಕನ್ನು ಮತ್ತೊಂದು ವಿಮಾನದಲ್ಲಿ ಕೋಲ್ಕತ್ತಾಗೆ ಕಳುಹಿಸಲಾಯಿತು.

LEAVE A REPLY