ಪಡುಕೋಣೆ ಕುಟುಂಬದ ಬ್ಯಾಂಕ್ ಖಾತೆ ಸ್ಥಗಿತ: ಐಡಿಬಿಐ ವ್ಯವಸ್ಥಾಪಕ ನಿರ್ದೇಶಕರಿಗೆ ನೋಟಿಸ್

ಬೆಂಗಳೂರು: ವಿಕ್ರಂ ಇನ್ವೆಸ್ಟ್‌ಮೆಂಟ್ ಕಂಪನಿಯಲ್ಲಿ ಹಣ ಹೂಡಿಕೆ ನಡೆಸಿರುವ ಪ್ರಕರಣಕ್ಕೆ ಸಂಬಂಧಿಸಿ ಖ್ಯಾತ ಬ್ಯಾಡ್ಮಿಂಟನ್ ಕೋಚ್ ಪ್ರಕಾಶ್ ಪಡುಕೋಣೆ ಅವರ ಕುಟುಂಬದ ಬ್ಯಾಂಕ್ ಖಾತೆಯನ್ನು ತನಿಖೆಗಾಗಿ ಸ್ಥಗಿತಗೊಳಿಸಲಾಗಿದೆ.
ಈ ಸಂಬಂಧ ತಮ್ಮ ಖಾತೆಯನ್ನು ಸ್ಥಗಿತಗೊಳಿಸಿರುವ ಕ್ರಮ ಪ್ರಶ್ನಿಸಿ ಪ್ರಕಾಶ್ ಪಡುಕೋಣೆ ಹೈಕೋರ್ಟ್ ಮೆಟ್ಟಿಲೇರಿದ್ದಾರೆ. ಈ ಬಗ್ಗೆ ರಿಟ್ ಅರ್ಜಿ ಸಲ್ಲಿಸಲಾಗಿದ್ದು, ಅರ್ಜಿಯ ವಿಚಾರಣೆ ನಡೆಸಿದ ಹೈಕೋರ್ಟ್ ಬನಶಂಕರಿ ಪೋಲಿಸರಿಗೆ ಮತ್ತು ಮಲ್ಲೇಶ್ವರಂನ ಐಡಿಬಿಐ ಬ್ಯಾಂಕ್ ವ್ಯವಸ್ಥಾಪಕ ನಿರ್ದೇಶಕರಿಗೆ ನೋಟಿಸ್ ಜಾರಿ ಮಾಡಿದೆ ಎಂದು ತಿಳಿದುಬಂದಿದೆ.
ವಿಕ್ರಂ ಇನ್ವೆಸ್ಟಿಂಗ್ ಕಂಪನಿ ಷೇರು ವ್ಯವಹಾರದ ಹೆಸರಿನಲ್ಲಿ ೮೦೦ ಕೋಟಿಗೂ ಹೆಚ್ಚು ಹಣವನ್ನು ಮೋಸ ಮಾಡಿದ ಆರೋಪ ಎದುರಿಸುತ್ತಿದೆ. ಮಾಜಿ ಕ್ರಿಕೆಟಿಗ ರಾಹುಲ್ ದ್ರಾವಿಡ್, ಪ್ರಕಾಶ್ ಪಡುಕೋಣೆ ಸೇರಿದಂತೆ ಹಲವು ಪ್ರತಿಷ್ಠಿತರು ಹಣ ಹೂಡಿಕೆ ಮಾಡಿದ್ದರು ಎನ್ನಲಾಗಿದೆ.

LEAVE A REPLY