ಅಲಹಾಬಾದ್‌ನಲ್ಲಿ ಅಂಬೇಡ್ಕರ್ ಪ್ರತಿಮೆ ವಿರೂಪ: ಬಿಗಿ ಪೊಲೀಸ್ ಬಂದೋಬಸ್ತ್

ಅಲಹಾಬಾದ್: ಇಲ್ಲಿನ ಟ್ರಾನ್ಸ್ ಗಂಗಾ ಪ್ರದೇಶದಲ್ಲಿದ್ದ ಸಂವಿಧಾನ ಶಿಲ್ಪಿ ಡಾ. ಅಂಬೇಡ್ಕರ್ ಪ್ರತಿಮೆಯನ್ನು ಕಿಡಿಗೇಡಿಗಳು ಧ್ವಂಸಗೊಳಿಸಿದ್ದು, ಉದ್ವಿಗ್ನ ಸ್ಥಿತಿ ನಿರ್ಮಾಣಕ್ಕೆ ಕಾರಣವಾಗಿದೆ
ತ್ರಿವೇಣಿಪುರಂನಲ್ಲಿ ಈ ಪ್ರತಿಮೆ ಸ್ಥಾಪಿಸಲಾಗಿತ್ತು. ಕಳೆದ ರಾತ್ರ ಕಿಡಿಗೇಡಿಗಳು ಪ್ರತಿಮೆಯ ಮೇಲಿನ ಭಾಗವನ್ನು ಸಂಪೂರ್ಣವಾಗಿ ಧ್ವಂಸಗೊಳಿಸಿದ್ದಾರೆ. ಘಟನೆ ಬಗ್ಗೆ ಮಾಹಿತಿ ತಿಳಿಯುತ್ತಿದ್ದಂತೆಯೇ ಸ್ಥಳಕ್ಕೆ ಧಾವಿಸಿ ಬಂದ ಪೊಲೀಸರು, ಬಿಗಿ ಭದ್ರತೆ ನೀಡಿದ್ದಾರೆ.
ಕಳೆದ ಕೆಲ ದಿನಗಳ ಹಿಂದೆಯಷ್ಟೇ ಪೆರಿಯಾರ್ ಹಾಗೂ ಲೆನಿನ್ ಪ್ರತಿಮೆ ವಿರೂಪಗೊಳಿಸಿದ್ದ ಪ್ರಕರಣ ದೇಶಾದ್ಯಂತ ಬಾರಿ ಚರ್ಚೆಗೆ ಗ್ರಾಸವಾಗಿದ್ದವು. ಇದರ ಬೆನ್ನಿಗೇ ಈ ಘಟನೆ ನಡೆದಿದೆ. ಈ ಕೃತ್ಯಕ್ಕೆ ವ್ಯಾಪಕ ಅಸಮಾಧಾನ ವ್ಯಕ್ತವಾಗಿರುವ ಹಿನ್ನೆಲೆಯಲ್ಲಿ ಬೇರೊಂದು ಪ್ರತಿಮೆ ಸ್ಥಾಪಿಸುವುದಾಗಿ ಸ್ಥಳೀಯ ಅಧಿಕಾರಿಗಳು ಭರವಸೆ ನೀಡಿದ್ದಾರೆ.

LEAVE A REPLY