ದೊಡ್ಡಮನಿ ಸಿಇಟಿ ಟಾಪರ್, ದಕ್ಷಿಣ ಕನ್ನಡ ಜಿಲ್ಲೆಯ ನಾರಾಯಣ ಪೈ ದ್ವಿತೀಯ

ಬೆಂಗಳೂರು: ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಶುಕ್ರವಾರ ಸಾಮಾನ್ಯ ಪ್ರವೇಶ ಪರೀಕ್ಷೆ (ಸಿಇಟಿ) ಫಲಿತಾಂಶ ಪ್ರಕಟಗೊಂಡಿದ್ದು, ವಿಜಯಪುರದ ಶ್ರೀಧರ್ ದೊಡ್ಡಮನಿ ಬಿಇಯಲ್ಲಿ ಪ್ರಥಮ ರಾಂಕ್ ಗಳಿಸಿದ್ದಾರೆ.
ದಕ್ಷಿಣ ಕನ್ನಡ ಜಿಲ್ಲೆಯ ನಾರಾಯಣ ಪೈ ದ್ವಿತೀಯ ರಾಂಕ್, ಡಿಬೋರ್ಸ್ ಸನ್ಯಾಸಿ ಮೂರನೇ ಸ್ಥಾನ ಪಡೆದಿದ್ದಾರೆ. ಇನ್ನು ಬೆಂಗಳೂರಿನ ಮಹಿಮಾ ಕೃಷ್ಣ ತೃತೀಯ, ಬಳ್ಳಾರಿಯ ಎಸ್‌ಆರ್ ಅಪರೂಪ ನಾಲ್ಕನೇ ರ್‍ಯಾಂಕ್ ಗಳಿಸಿದ್ದಾರೆ.
ಉನ್ನತ ಶಿಕ್ಷಣ ಇಲಾಖೆಯ ಪ್ರಧಾನ ಕಾರ್ಯದರ್ಶಿ ಹಾಗೂ ವೈದ್ಯಕೀಯ ಶಿಕ್ಷಣ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿಗಳು ಶುಕ್ರವಾರ ಫಲಿತಾಂಶವನ್ನು ಸುದ್ದಿಗೋಷ್ಠಿಯಲ್ಲಿ ಪ್ರಕಟಿಸಿದರು.

LEAVE A REPLY