ವಾಣಿಜ್ಯ ನಗರಿಯಲ್ಲಿ ವರುಣಾರ್ಭಟ: ಇಬ್ಬರು ಮಕ್ಕಳು ಸೇರಿದಂತೆ ಮೂವರ ಸಾವು

ಮುಂಬೈ: ದೇಶದ ವಾಣಿಜ್ಯ ನಗರಿಯಲ್ಲಿ ಮಳೆ ಅಬ್ಬರ ಮುಂದುವರಿದಿದ್ದು, ಕಳೆದ ರಾತ್ರಿ ವಿದ್ಯುತ್ ಸ್ಪರ್ಶದಿಂದ ಇಬ್ಬರು ಮಕ್ಕಳು ಸೇರಿದಂತೆ ಮೂವರು ಸಾವನ್ನಪ್ಪಿದ್ದಾರೆ.
ಸುರಿಯುತ್ತಿರುವ ಧಾರಾಕಾರ ಮಳೆಯಿಂದಾಗಿ ನಗರದ ವಿವಧೆಡೆಗಳಲ್ಲಿನ ರಸ್ತೆಗಳು ಜಲಾವೃತವಾಗಿದ್ದು, ವಾಹನ ಸಂಚಾರಕ್ಕೆ ಆಡ್ಡಿಯಾಗಿದೆ. ಇದಲ್ಲದೆ ವಾಹನ ದಟ್ಟಣೆಯಿಂದ ಸಂಚಾರ ವ್ಯವಸ್ಥೆ ಅಸ್ತವ್ಯಸ್ಥವಾಗಿದೆ. ಮಳೆಯಿಂದಾಗಿ ಇಲ್ಲಿನ ಛತ್ರಪತಿ ಶಿವಾಜಿ ಮಹಾರಾಜ್ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ವಿಮಾನಗಳ ಹಾರಾಟದಲ್ಲಿ ವ್ಯತ್ಯಯವಾಗಿದೆ. ಥಾಣೆ, ಫಲ್ಘರ್, ರಾಯ್‌ಗಢ್ ಮತ್ತು ರತ್ನಗಿರಿ ಜಿಲ್ಲೆಗಳ ಅನೇಕ ಪ್ರದೇಶಗಳಲ್ಲಿ ಭಾರೀ ಮಳೆಯಾಗಿ ಜನಜೀವನ ಅಸ್ತವ್ಯಸ್ತಗೊಂಡಿದೆ.

LEAVE A REPLY