ಲೋಕಸಭೆ ಚುನಾವಣೆಯಲ್ಲೂ ಜೆಡಿಎಸ್ ಕಾಂಗ್ರೆಸ್ ಒಂದಾಗಲಿದೆ

ಚಿತ್ರದುರ್ಗ: ಸಮ್ಮಿಶ್ರ ಸರಕಾರದಲ್ಲಿ ಯಾವುದೇ ಗೊಂದಲಗಳು ಇಲ್ಲ. ಮುಂದೆ ಲೋಕಸಭೆ ಚುನಾವಣೆಯಲ್ಲೂ ಜೆಡಿಎಸ್ – ಕಾಂಗ್ರೆಸ್ ಒಂದಾಗಿ ಹೋಗಲಿದೆ ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಹೆಚ್.ವಿಶ್ವನಾಥ್ ಹೇಳಿದ್ದಾರೆ.
ಚಿತ್ರದುರ್ಗದಲ್ಲಿ  ಸುದ್ದಿಗೋಷ್ಠಿ ಮಾತನಾಡಿದ ಅವರು, ಒಂದು ತಿಂಗಳಿನಿಂದ ನಡೆಯುತ್ತಿದ್ದ ರಾಜಕೀಯ ಗೊಂದಲಗಳು ಮೂಲೆ ಸೇರಿವೆ. ಈಗ ಸರಕಾರವು ರಾಜ್ಯದ ಅಭಿವೃದ್ಧಿ ಕೆಲಸಗಳಲ್ಲಿ ತೊಡಗಿದೆ. ಆದರೆ ಬಿಜೆಪಿ ಗೊಂದಲ ಸೃಷ್ಠಿ ಮಾಡುತ್ತಿದೆ.
ರಾಜ್ಯದ ರೈತರ ಸಾಲ ಮನ್ನಾ 48ಸಾವಿರ ಕೋಟಿ ರೂ ಮನ್ನಾ ಮಾಡಲಾಗಿದೆ ಇದಕ್ಕಾಗಿಯೇ ಪ್ರಾಂತೀಯ ಪಕ್ಷಗಳು ಬೇಕು ಎಂಬುದಕ್ಕೆ ಇದೊಂದು ಉತ್ತಮ ಉದಾಹರಣೆಯಾಗಿದೆ.  ಸ್ಥಳೀಯ ಸಮಸ್ಯೆಗಳನ್ನು ಬಗೆಹರಿಸುವ ಶಕ್ತಿ ಪ್ರಾಂತೀಯ ಪಕ್ಷಕ್ಕೆ ಮಾತ್ರ ಇದೆ ಎಂದರು.
ಸಾರಿಗೆ ಸಚಿವ ಡಿ ಸಿ ತಮ್ಮಣ್ಣ, ಜೆಡಿಎಸ್ ಜಿಲ್ಲಾಧ್ಯಕ್ಷ ಡಿ.ಯಶೋಧರ, ರಾಜ್ಯ ಪ್ರಧಾನ ಕಾರ್ಯದರ್ಶಿ ಬಿ‌.ಕಾಂತರಾಜ್, ಜಿಲ್ಲಾ ವಕ್ತಾರ ಗೋಪಾಲಸ್ವಾಮಿ ನಾಯಕ್, ಮುಖಂಡರುಗಳಾದ ಮುತ್ತಣ್ಣ, ವೀರಣ್ಣ ಮತ್ತಿತರರು ಸುದ್ದಿಗೋಷ್ಠಿಯಲ್ಲಿದ್ದರು.

LEAVE A REPLY