ಶಿರಾಡಿ ಘಾಟ್ ಬಸ್ ಸಂಚಾರ: ಜಿಲ್ಲಾಧಿಕಾರಿಗಳ ಸಭೆ ಬಳಿಕ ನಿರ್ಧಾರ

ಮಂಗಳೂರು: ಮಂಗಳೂರು ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಶಿರಾಡಿ ಘಾಟಿ ರಸ್ತೆಯಲ್ಲಿ ಬಸ್ ಮತ್ತು ಪ್ರಯಾಣಿಕರ ವಾಹನಗಳ ಸಂಚಾರಕ್ಕೆ ಅವಕಾಶ ನೀಡಲು ಹಾಸನ ಜಿಲ್ಲಾಧಿಕಾರಿಗಳೊಂದಿಗೆ ಚರ್ಚಿಸಿದ ಬಳಿಕ ನಿರ್ಧಾರ ಕೈಗೊಳ್ಳಲಾಗುವುದು ಎಂದು ದ.ಕ. ಜಿಲ್ಲಾಧಿಕಾರಿ ಸಸಿಕಾಂತ್ ಸೆಂಥಿಲ್ ತಿಳಿಸಿದ್ದಾರೆ.
ಶಿರಾಡಿ ಘಾಟಿ ರಸ್ತೆಯಲ್ಲಿ ಬಸ್ಸುಗಳ ಸಂಚಾರಕ್ಕೆ ಅನುವು ಮಾಡಲು, ಹೆದ್ದಾರಿಯಲ್ಲಿ ಸುರಕ್ಷತಾ ಕ್ರಮಗಳನ್ನು ಪರಿಶೀಲಿಸಿ, ಹಾಸನ ಡಿಸಿಯವರೊಂದಿಗೆ ಚರ್ಚಿಸಿದ ಬಳಿಕ ನಿರ್ಧರಿಸಲಾಗುವುದು ಎಂದು ಅವರು ತಿಳಿಸಿದ್ದಾರೆ.

ಕಳೆದ ಅನೇಕ ದಿನಗಳಿಂದ ಶಿರಾಡಿ ಘಾಟ್ ರಸ್ತೆಯ ಮೂಲಕವಾಗಿ ಘನ ವಾಹನಗಳ ಓಡಾಟ ಆರಂಭವಾಗಬೇಕು ಎಂಬ ಒತ್ತಾಯ ಸಾರ್ವಜನಿಕರಿಂದ ಕೇಳಿಬಂದಿತ್ತು.

LEAVE A REPLY